ಬೆಂಗಳೂರು
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಿಸಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ, ನಕಲಿ ಪರುಶರಾಮ ಮೂರ್ತಿಯ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೇಟಿ ನೀಡಿ ಸಾಥ ನೀಡಿದರು.
ಈ ವೇಳೆ ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ಉದಯ್ ಕುಮಾರ್ ಶೆಟ್ಟಿ ಮುನಿಯಾಳ್, ಮಿಥುನ್ ರೈ, ದಿನೇಶ್ ಹೆಗ್ಡೆ ಮೊಳಹಳ್ಳಿ, ಸುಧೀರ್ ಕುಮಾರ್ ಮೊರಳ್ಳಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಹರೀಶ್ ಕುಮಾರ್, ಕಿಶನ್ ಹೆಗ್ಡೆ, ಕಿರಣ್ ಹೆಗ್ಡೆ, ರಮೇಶ್ ಕಾಂಚನ್, ಕೃಪಾ ಆಳ್ವ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು