ರಾಜ್ಯದಲ್ಲಿ ರಾಜಕಾರಣದಲ್ಲಿ ದಿನಕ್ಕೊಂದು ನಡೆಯುತ್ತಿರುವ ಬೆಳವಣೆಗೆಯ ಮಧ್ಯ ಮತ್ತೆ ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವರಾದ ಎಚ್ ಡಿ ಕುಮಾರಾಸ್ವಾಮಿಯವರು ತಮ್ಮ ಪಕ್ಷದ ಕಛೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಕರೆದಿರುವುದು ಬಾರಿ ಕೂತುಹಲ ಮೂಡಿಸಿದೆ.
ಈ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಕಾಂಗ್ರೆಸ್ ನವರೂ ಇವರಿಗೆ ನನ್ನನ್ನು ಏನೂ ಮಾಡಲು ಆಗಲಿಲ್ಲ, ಈಗಲೂ ಏನೂ ಮಾಡಲು ಸಾಧ್ಯವಿಲ್ಲ. ಈ ಸರ್ಕಾರದ ಸಚಿವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಜವರಿಗೆ ನನ್ನ ರಾಜೀನಾಮೆ ಕೇಳುವ, ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಈ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲ ಎಂಬುದು ದಾಖಲೆಗಳೇ ಹೇಳುತ್ತವೆ. ಇವರ ಹಾಗೆ ನಾನು ಸರ್ಕಾರದ ಭೂಮಿ ಲೂಟಿ ಮಾಡಿಲ್ಲ. ಮೂಡಾ ಹಗರಣವನ್ನೇ ನೋಡಿದ್ದೀರಿ. ಕುಮಾರಸ್ವಾಮಿ ಯಾಕೆ ರಾಜಿನಾಮೆ ಕೊಡಬೇಕು? ಲೂಟಿ ಮಾಡಿರೋದು ಇವರು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಮುಂದುವರೆದು ಇಂದು (ಶನಿವಾರ) ಬೆಳಗ್ಗೆ 11 ಗಂಟೆಗೆ ದಾಖಲಾತಿಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಹೇಳಿರುವ ಅವರು ದಾಖಲೆ ಬಿಡುಗಡೆ ನಂತರ ಹೆಚ್ಚನ ವಿಷಯ ಚರ್ಚೆ ಮಾಡುತ್ತೆನೆ ಎಂದು ತಿಳಿಸಿದ್ದಾರೆ.