ಜಿಯೋ ಸಂಸ್ಥೆಯ ಈ 189ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನಿನಲ್ಲಿ ಚಂದಾದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಲಭ್ಯ ಆಗಲಿದೆ. ಹಾಗೆಯೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 2GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿಗೆ ಒಟ್ಟು 3600 ಎಸ್ಎಮ್ಎಸ್ ಪ್ರಯೋಜನದ ಸೌಲಭ್ಯ ಗ್ರಾಹಕರಿಗೆ ಸಿಗಲಿದೆ. ಇದರೊಂದಿಗೆ ಈ ರೀಚಾರ್ಜ್ ಪ್ಲ್ಯಾನಿನಲ್ಲಿ ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ.ಅಂದಹಾಗೆ 28 ದಿನಗಳ ವ್ಯಾಲಿಡಿಟಿ ಅವಧಿಗೆ 2GB ಡೇಟಾ ಇದ್ದು, ಯಾವುದೇ ದೈನಂದಿನ ಡೇಟಾ ಮಿತಿ ಇರುವುದಿಲ್ಲ. ಅಲ್ಲದೇ ಒಟ್ಟು 300 ಎಸ್ಎಮ್ಎಸ್ ಸೌಲಭ್ಯ ನೀಡಲಾಗಿದ್ದು, ದೈನಂದಿನ ಮಿತಿ ಇರಲ್ಲ. ಇದರ ಜೊತೆಗೆ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಜಿಯೋ ಕ್ಲೌಡ್ ಸೇವೆಗಳು ದೊರೆಯುತ್ತವೆ. ಜಿಯೋ ಸಂಸ್ಥೆಯ ಈ 479ರೂ. ರೀಚಾರ್ಜ್ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಸಿಗಲಿದೆ. ಹಾಗೆಯೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 6GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿಗೆ ಒಟ್ಟು 1000 ಎಸ್ಎಮ್ಎಸ್ ಪ್ರಯೋಜನದ ಸೌಲಭ್ಯ ಕೂಡಾ ದೊರೆಯುತ್ತದೆ. ಅಲ್ಲದೇ ಈ ರೀಚಾರ್ಜ್ ಪ್ಲ್ಯಾನಿನಲ್ಲಿ ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ.
ಇನ್ನು ಈ ಪ್ರೀಪೇಯ್ಡ್ ಯೋಜನೆಯಲ್ಲಿ ಒಟ್ಟು 6GB ಡೇಟಾ ಸೌಲಭ್ಯ ಇದ್ದು, ಯಾವುದೇ ದೈನಂದಿನ ಡೇಟಾ ಮಿತಿ ಇರುವುದಿಲ್ಲ. ಅಲ್ಲದೇ ಒಟ್ಟು 1000 ಎಸ್ಎಮ್ಎಸ್ ಲಭ್ಯ ಇದ್ದು, ಯಾವುದೇ ದೈನಂದಿನ ಮಿತಿ ನೀಡಿಲ್ಲ. ಇದರ ಜೊತೆಗೆ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಜಿಯೋ ಕ್ಲೌಡ್ ಸೇವೆಗಳು ಸಹ ಸಿಗಲಿವೆ.