ವಿಜಯಪುರ: ದಿನನಿತ್ಯ ಬಳಕೆಯ ವಸ್ತುಗಳ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದವರು ಪ್ರತಿಭಟನೆ ನಡೆಸಿದರು. ವಿಜಯಪುರ ನಗರದ ಗಾಂಧಿಚೌಕ್ನಲ್ಲಿ ಪ್ರತಿಭಟನೆ ನಡೆಸಿದ್ದರು.
ಕೆಂದ್ರ ಸರ್ಕಾರದವರು ಮೊಸರು, ಮಜ್ಜಿಗೆ, ಲಸ್ಸಿ ಸೇರಿದಂತೆ ವಿವಿಧ ವಸ್ತುಗಳನ್ನು ಜಿಎಸ್ಟಿ ಏರಿಕೆ ಮಾಡಿದ್ದು ಖಂಡನೀಯ. ಕೇಂದ್ರ ಸರ್ಕಾರ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ತಕ್ಷಣವೇ ಜಿಎಸ್ಟಿ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.