ವಿಜಯಪುರ: ಹರ್ ಘರ್ ತಿರಂಗಾ ಸೈಕಲ್ ಜಾಥಾಗೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಚಾಲನೆ ನೀಡಿದರು.
ವಿಜಯಪುರ ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಡಿಸಿ ಸೈಕಲ್ ಓಡಿಸುವ ಮೂಲಕ ಚಾಲನೆ ನೀಡಿದರು. ಅಲ್ಲದೇ, ಸೈಕಲ್ ಜಾಥಾ ಜಲನಗರ, ಬಸವೇಶ್ವರ ಸರ್ಕಲ್ ಸೇರಿದಂತೆ ನಗರಾದ್ಯಂತ ನಡೆಸಿ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ ಎಂದು ಅಭಿಯಾನ ಮಾಡಿದರು. ಈ ವೇಳೆಯಲ್ಲಿ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂದೆ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.