ವಿಜಯಪುರ: ಲಾರಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಮರಕ್ಕೆ ಡಿಕ್ಕಿಯಾಗಿ, ತದನಂತರ ಶಾರ್ಟ್ ಸರ್ಕ್ಯೂಟ್ನಿಂದ ಲಾರಿಗೆ ಬೆಂಕಿ ಹತ್ತಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಚಡಚಣ ಬರಡೋಲ ರಸ್ತೆಯಲ್ಲಿ ನಡೆದಿದೆ.
ಮೈಸೂರಿಗೆ ಹೊರಟಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ 24 ಟನ್ ಹತ್ತಿ ಭಸ್ಮವಾಗಿದೆ. ಅಲ್ಲದೇ, ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲಿನರ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದರು. ಚಡಚಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.