ವಿಜಯಪುರ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ವಿರುದ್ಧ ಎಫ್ಐಆರ್ ದಾಖಲು ಆಗಿದೆ.
ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ ವಿರುದ್ಧ ಕೇಸ್ ದಾಖಲಾಗಿದ್ದು, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿದ್ದಪ್ಪ ಛಾಯಾಗೋಳ್ ದೂರಿನನ್ವಯ ಕೇಸ್ ಆಗಿದೆ. ಇನ್ನು ಕಲಂ 447, 505(1B) ಕೇಸ್ ದಾಖಲಾಗಿದೆ. ಈ ಕುರಿತು ವಿಜಯಪುರ ಜಲನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.