ವಿಜಯಪುರ: ವಿಜಯಪುರ ನಗರದಲ್ಲಿ ವಿವಿಧ ಕಾಮಗಾರಿ ಬಗ್ಗೆ ಅಧಿಕಾರಿಗಳು, ಸ್ಥಳೀಯರಿಂದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಹಿತಿ ಕಲೆ ಹಾಕಿದರು.
ನಗರದ ಬಸವೇಶ್ವರ ಸರ್ಕಲ್ ನಿಂದ ಶಿವಾಜಿ ಸರ್ಕಲ್ ವರೆಗೂ ನಡೆದುಕೊಂಡು ಸ್ಥಳೀಯರ ಸಮಸ್ಯೆ ಆಲಿಸಿದರು. ಅಲ್ಲದೇ, ನಗರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಅದಕ್ಕಾಗಿ ರಸ್ತೆ, ಚರಂಡಿ ಸಮಸ್ಯೆ ಸೇರಿದಂತೆ ವಿವಿಧ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ವೇಳೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಮೆಕ್ಕಳಕಿ, ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು. ಈ ವೇಳೆಯಲ್ಲಿ ಮಾತನಾಡಿದ ಅವರು, ಮುರುಘಾ ಶ್ರೀಗಳ ಬಗ್ಗೆ ನಾನು ಮಾತನಾಡಲ್ಲ. ಮುರುಘಾ ಶ್ರೀಗಳ ಬಗ್ಗೆ ಬಿವೈ ವಿಜಯೇಂದ್ರ ಹಾಗೂ ಬಿಎಸ್ವೈಗೆ ಕೇಳಿ ಎಂದರು.