ಚಿಕ್ಕಮಗಳೂರು: ಗಣೇಶ ಮೂರ್ತಿ ವಿಸರ್ಜಿಸಿ ಮರಳುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೂವರು ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ವಿದ್ಯುತ್ ತಂತಿ ತಗುಲಿ ರಾಜು (47) ರಚನಾ (35) ಪಾರ್ವತಿ (26) ಸಾವನಪ್ಪಿದ್ದಾರೆ. ಗಂಭೀರ ಗಾಯಗೊಂಡ ಆರು ಜನ ಮೂಡಿಗೆರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂಜಿನ್ ಮೇಲೆ ಕೂತಿದ್ದ ಡ್ರೈವರ್ ಅಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.