ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ಯನ್ನು ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ 85,177 ದಂಡ ಪಾವತಿಸುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ.
ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಬರೆದ ಚೆಕ್ ಬರೆದು ಹಳಿಯಾಳದ ಎಸ್ಬಿಐ ಶಾಖೆ ನೀಡಿದ್ದಾರೆ. ಆದ್ರೇ, ಬ್ಯಾಂಕ್ ಚೆಕ್ನ್ನು ತಿರಸ್ಕರಿಸಿತ್ತು. ಅದಕ್ಕಾಗಿ ನ್ಯಾಯಾಕ್ಕಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಮನವಿ ಸಲ್ಲಿಸಿದ್ದರು. ಸೇವಾ ನ್ಯೂನ್ಯತೆ ಎಂದು ಪರಿಗಣಿಸಿ ಎಸ್ಬಿಐ ಬ್ಯಾಂಕ್ ಶಾಖೆಯು ದೂರುದಾರರಿಗೆ ಪರಿಹಾರ ಪಾವತಿಸುವಂತೆ ಆದೇಶಿಸಿದೆ. ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿ.ಅ. ಬೋಳಶೆಟ್ಟಿ ಮತ್ತು ಪಿ.ಸಿ. ಹಿರೇಮಠ ಈ ತೀರ್ಪು ನೀಡಿದ್ದಾರೆ.