ವಿಜಯಪುರ: ವಿಜಯಪುರ ನಗರದ ಪ್ರತಿಷ್ಠಿತ ವಿಕಾಸ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಪಂಚತಾರಾ ಶ್ರೇಣಿಯ ಅಡಿಯಲ್ಲಿ ಜಿಲ್ಲಾ ಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರ ಪ್ರಶಸ್ತಿಗೆ ವಿಕಾಸ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿಜಯಪುರ ಆಯ್ಕೆಯಾಗಿದೆ.
ಪ್ರಶಸ್ತಿಯನ್ನು ನಗರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೀಡಿ ಗೌರವಿಸಿದರು. ಈ ವೇಳೆಯಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಸಿಂಧೆ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.