ವಿಜಯಪುರ: ಜಿಲ್ಲಾದ್ಯಂತ ಸುರಿದ ಮಳೆ, ಗಾಳಿಗೆ ಸಾವಿರಕ್ಕಿಂತ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ವಿಜಯಪುರ ಜಿಲ್ಲಾಡಳಿತ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ.
ಜಿಲ್ಲಾದ್ಯಂತ 1127 ಮನೆಗಳು ಹಾನಿಯಾಗಿದ್ದು, 1049 ಕಚ್ಚಾ ಹಾಗೂ 72 ಪಕ್ಕಾ ಮನೆಗಳಿಗೆ ಹಾನಿಯಾಗಿದೆ. ಅಲ್ಲದೇ, ಜಿಲ್ಲಾದ್ಯಂತ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.