ವಿಜಯಪುರ: 110/11 ಕೆವಿ ಕೆಐಡಿಬಿ ಜುಮನಾಳ ಹಾಗೂ ವಿಜಯಪುರದ ಸಿಟಿ ವಿದ್ಯುತ್ ವಿತರಣಾ ಕೇಂದ್ರಗಳು 220/110 ಕೆವಿ ವಿಜಯಪುರದಲ್ಲಿ ಕೆಪಿಟಿಸಿಎಲ್ ವತಿಯಿಂದ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಸೆಪ್ಟೆಂಬರ್ 15ರ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಈ ಉಪ ಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫಿಡರ್ ಮೇಲೆ ಬರುವ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ವಿಜಯಪುರ ಹೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.