ವಿಜಯಪುರ: ಕೌಟುಂಬಿಕ ಕಲಹ ಹಿನ್ನಲೆ ಗೃಹಿಣಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದಲ್ಲಿ ನಡೆದಿದೆ.
ರೂಪಾ ಸಂದೀಪ್ ಗಣತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು ಕಳೆದ ರಾತ್ರಿ ಗಂಡ ಸಂದೀಪ್ ಹಾಗೂ ರೂಪಾ ಮಧ್ಯೆ ಜಗಳವಾಗಿದೆ ಎಂದು ಹೇಳಲಾಗಿದೆ. ಅದಕ್ಕಾಗಿ ರೂಪಾ ಮನನೊಂದ ಶೆಡ್ಡಿನ ಮನೆಯಲ್ಲಿ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.