ವಿಜಯಪುರ: ಬೈಕ್ಗೆ ಕಾರ್ ಡಿಕ್ಕಿಯಾಗಿರುವ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಕ್ರಾಸ್ ಬಳಿ ನಡೆದಿದೆ.
ಪಡಗಾನೂರು ತಾಂಡಾದ ಬಾಬು ಚವ್ಹಾಣ, ಅಶೋಕ ನಾಯಕ್ ಮೃತಪಟ್ಟಿರುವ ಯುವಕರು.
ಘಟನೆ ಬಳಿಕ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳದಲ್ಲಿ ಮೃತ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.