ವಿಜಯಪುರ: ಮಕ್ಕಳ ಕಳ್ಳರು ಎಂದು ನಾಲ್ವರ ಮೇಲೆ ಹಲ್ಲೆ ಪ್ರಕರಣ ಹಿನ್ನಲೆ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆಂದು ಸುಳ್ಳು ವದಂತಿ ಸೃಷ್ಟಿಸುತ್ತಿರುವವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದ ವಿಜಯಪುರ ಎಸ್ಪಿ ಹೆಚ್ಡಿ ಆನಂದಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವದಂತಿಗಳಿಂದ ಅಮಾಯಕರ ಮೇಲೆ ಹಲ್ಲೆಗಳಾಗುತ್ತಿದೆ. ಮಕ್ಕಳ ಕಳ್ಳರು ಬಂದಿದ್ದಾರೆಂದು ವದಂತಿ ಹರಡುತ್ತಿರುವ ಕೆಲ ಕಿಡಿಗೇಡಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಇನ್ನೂ ಆಡಿಯೋ, ವಿಡಿಯೋ ಹರಿಬಿಟ್ಟು ಕಿಡಿಗೇಡಿಗಳಿಂದ ಆತಂಕ ಸೃಷ್ಟಿಯಾಗುತ್ತಿದ್ದು, ಅದಕ್ಕಾಗಿ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ 112ಗೆ ಕರೆ ಮಾಡುವಂತೆ ಪ್ರಕಟಣೆಯಲ್ಲಿ ಎಸ್ಪಿ ತಿಳಿಸಿದ್ದಾರೆ.