ವಿಜಯಪುರ: ಕಿನಾಲ್ ಪಕ್ಕದಲ್ಲಿರುವ ಜಮೀನಿನಲ್ಲಿ ನೀರು ಹಾಯಿಸಲು ಹೋಗಿದ್ದ ಸಹೋದರಿಬ್ಬರು ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹಳ್ಳದ ಗೆಣ್ಣೂರ ಗ್ರಾಮದಲ್ಲಿ ನಡೆದಿದೆ.
ಸುನೀಲ ಕಲ್ಲಪ್ಪ ಮಾದರ್, ಅನಿಲ ಕಲ್ಲಪ್ಪ ಮಾದರ ನೀರುಪಾಲಾದವರು. ಇನ್ನು ಬೆಳಗ್ಗೆ ಜಮೀನಿಗೆ ನೀರು ಹಾಯಿಸಲು ಹೋದಾಗ ಈ ದುರ್ಘಟನೆ ಸಂಬಂಧಿಸಿದೆ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲ್ಹಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.