ಧಾರವಾಡ: ನಾಳೆ ಮೈಸೂರು ದಸರಾಗೆ ಚಾಲನೆ ನೀಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬರುತ್ತಿದ್ದು, ತದನಂತರ ಧಾರವಾಡಕ್ಕೂ ಆಗಮಿಸಲಿದ್ದಾರೆ.
ಧಾರವಾಡ ಐಐಐಟಿ ನೂತನ ಕಟ್ಟಡವನ್ನು ರಾಷ್ಟ್ರಪತಿಗಳು ಲೋಕಾರ್ಪಣೆ ಮಾಡಲಿದ್ದಾರೆ. ಶಾಸಕರಾದ ಅರವಿಂದ ಬೆಲ್ಲದ ಸಿದ್ಧತೆ ಪರಿಶೀಲನೆ ಮಾಡಿದ್ದು, ನಾಳೆ ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಅತಿಥಿಗಳು ಸೇರಿದಂತೆ ಸುಮಾರು 700 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.
ಅಲ್ಲದೇ, ರಾಷ್ಟ್ರಪತಿ ಮುರ್ಮು ಅವರಿಗೆ ಉತ್ತರ ಕರ್ನಾಟಕ ಶೈಲಿಯ ಊಟ ರೆಡಿ ಮಾಡಲಾಗುವುದು. ಐಐಐಟಿ ನಿರ್ಮಾಣಕ್ಕೆ ಜಾಗ ನೀಡಿದ ರೈತರಿಗೆ ಇದೇ ವೇಳೆ ಸನ್ಮಾನ ಮಾಡಲಾಗುವುದು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರು, ರಾಜ್ಯ ಸಚಿವರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.