ವಿಜಯಪುರ: ಭೀಮಾತೀರದ ಸರ್ಕಾರಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿಗೈದಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು. ವಿಜಯಪುರ ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣವರ್ ನೇತೃತ್ವದಲ್ಲಿ ದಾಳಿಗೈದು ಆಸ್ಪತ್ರೆಯಲ್ಲಿನ ಚಿಕಿತ್ಸೆ, ಸ್ವಚ್ಛತೆ, ರೋಗಿಗಳ ಕಾಳಜಿ ಕುರಿತು ಮಾಹಿತಿ ಕಲೆ ಹಾಕಿದರು.
ಅಲ್ಲದೇ, ಆಸ್ಪತ್ರೆಯ ವಿರುದ್ಧ ವಿವಿಧ ದೂರುಗಳ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ದಾಳಿಗೈದು ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡಿದರು. ದಾಳಿ ವೇಳೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.