ವಿಜಯಪುರ: ಹಿಟ್ ಆ್ಯಂಡ್ ರನ್ಗೆ ಓರ್ವ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ಹಿಟ್ನಳ್ಳಿಯ ನಾಶಿ ಡಾಬಾದ ಬಳಿ ನಡೆದಿದೆ.
ಉತ್ನಾಳ ಗ್ರಾಮದ ಸುಭಾಷ್ ಸೀತಾರಾಮ ರಜಪೂತ ಮೃತಪಟ್ಟಿರುವ ದುರ್ದೈವಿ. ಬೈಕ್ನಲ್ಲಿ ಊರಿಗೆ ಹೋಗುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಇದರಿಂದ ಬೈಕ್ ಸವಾರ ಸುಭಾಷ್ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪಿಎಸ್ಐ ಉಪ್ಪಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.