ವಿಜಯಪುರ: ಮನೆಯ ಎದುರು ನಿಲ್ಲಿಸಿದ ಬೈಕ್ ಕಳ್ಳತನ ಮಾಡುವ ವೇಳೆಯಲ್ಲಿ ಸಿಕ್ಕಿ ಬಿದ್ದ ಕಳ್ಳನಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ವಿಜಯಪುರ ತಾಲ್ಲೂಕಿನ ಶಿವಣಗಿ ಗ್ರಾಮದಲ್ಲಿ ನಡೆದಿದೆ.
ಇನ್ನು ಕಳ್ಳನ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕಳ್ಳನ ಬಗ್ಗೆ ಸ್ಥಳೀಯರು ಮಾಹಿತಿ ಕೇಳಿದ್ರೂ ಸಮರ್ಪಕವಾದ ಮಾಹಿತಿ ನೀಡಿಲ್ಲ. ಅದಕ್ಕಾಗಿ ಸ್ಥಳೀಯರು ಧರ್ಮದೇಟು ನೀಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕಳ್ಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.