ವಿಜಯಪುರ: ಭಾರತ ಜೋಡೋ ಪಾದಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪೊಲೀಸರ ಬಗ್ಗೆ ಹೇಳಿಕೆ ವಿಜಯಪುರ ಪೊಲೀಸ್ ಪೇದೆ ಫೇಸ್ಬುಕ್ ನಲ್ಲಿ ಕಾಮೆಂಟ್ ಮಾಡಿದ್ದು, ಇದೀಗ್ ಸಕತ್ ವೈರಲ್ ಆಗುತ್ತಿದೆ.
ಪೊಲೀಸ್ ನವರೇನಾದರೂ ಅವರ ಜತೆ ಶಾಮೀಲಾದ್ರೆ ಅನ್ನೋ ಸಿದ್ದರಾಮಯ್ಯ ಮಾತಿಗೆ ಫೇಸ್ಬುಕ್ ನಲ್ಲಿ ವಿಜಯಪುರ ಗ್ರಾಮೀಣ ಠಾಣಾ ಪೇದೆ ರಾಜಶೇಖರ ಖಾನಾಪುರ ಕಾಮೆಂಟ್ ಮಾಡಿದ್ದಾರೆ. ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು ಎಂದು ಕಾಮೆಂಟ್ ಹಾಕಿದ್ದಾರೆ.
ಇದರಿಂದ ವಾಟ್ಸಾಪ್ ಗ್ರುಪ್, ಸೋಷಿಯಲ್ ಮೀಡಿಯಾದಲ್ಲಿ ಪೇದೆ ಕಾಮೆಂಟ್ ಪೋಸ್ಟ್ ವೈರಲ್ ಆಗುತ್ತಿದೆ. ಅಲ್ಲದೇ, ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯ ಅಭಿಮಾನಿಗಳಿಂದ ಪೊಲೀಸ್ ಪೇದೆ ನಡೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಹುದ್ದೆಯಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕಾದ ಇವರು. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಪರ ಮಾತನಾಡುತ್ತಾರೆ. ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದಾರೆ ಎಂದು ಅಭಿಮಾನಿಗಳಿಂದ ಆಕ್ಷೇಪ ವ್ಯಕ್ತವಾಗಿದೆ.