ವಿಜಯಪುರ: ಬಿಜೆಪಿ ಸರ್ಕಾರದ ದುರಾಡಳಿತ, ಕಾಂಗ್ರೆಸ್ದ ಅನ್ಯಾಯ ವಿರುದ್ಧ ನಾವು ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸುತ್ತೇವೆ ಎಂದು ಎಂಐಎಂ ಜಿಲ್ಲಾಧ್ಯಕ್ಷ ಅಲ್ಲಾಭಕ್ಷ ಬಿಜಾಪುರ ಹೇಳಿದರು.
ವಿಜಯಪುರ ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆ 35 ವಾರ್ಡ್ಗಳಲ್ಲಿ 20 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತೇವೆ ಎಂದರು. ಇನ್ನು ಉಳಿದ ವಾರ್ಡ್ಗಳಿಗೆ ಸೂಕ್ತ ಅಭ್ಯರ್ಥಿಗಳು ಸಿಕ್ರೆ ಖಂಡಿತವಾಗಿಯೂ 35 ವಾರ್ಡ್ಗಳಿಗೆ ಸ್ಪರ್ಧೆ ಖಚಿತ ಎಂದರು.
ಇನ್ನು 20ಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧ್ಯತೆ ಇದೆ. ಅದಕ್ಕಾಗಿ ನಮ್ಮ ಪಕ್ಷದ ಕಾರ್ಯಕರ್ತರು ಹಗಲಿರುಳು ಕಾರ್ಯ ತಂತ್ರ ರೂಪಿಸುತ್ತಿದ್ದಾರೆ ಎಂದರು.