ವಿಜಯಪುರ: ಬೈಕ್ನಲ್ಲಿ ರಸ್ತೆ ಕ್ರಾಸ್ ಮಾಡುವಾಗ ಬೈಕ್ಗೆ ಕಾರು ಡಿಕ್ಕಿಯಾಗಿರುವ ಪರಿಣಾಮ ಓರ್ವ ಬಾಲಕ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಮನಗೂಳಿಯಲ್ಲಿ ನಡೆದಿದೆ.
12 ವರ್ಷದ ರಿಯಾಜ್ ಮೃತಪಟ್ಟಿರುವ ಬಾಲಕ. ಅಲ್ಲದೇ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.