ವಿಜಯಪುರ: ಜಮೀನಿನಲ್ಲಿ ಕೆಲಸ ಮಾಡುವ ವೇಳೆಯಲ್ಲಿ ಸಿಡಿಲು ಬಡಿದು ವ್ಯಕ್ತಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚೋರಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಪೀರಪ್ಪ ಗೋವಿಂದ ಕೋರೆ ಮೃತಪಟ್ಟಿರುವ ದುರ್ದೈವಿ. ಇನ್ನು ಜಮೀನಿನಲ್ಲಿ ಮೆಕ್ಕೆಜೋಳ ಕಟ್ ಮಾಡುವ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ. ಅಲ್ಲದೇ, ಇಂಡಿ ಸರ್ಕಾರಿ ಆಸ್ಪತ್ರೆಗೆ ಜೆಡಿಎಸ್ ಮುಖಂಡ ಬಿಡಿ ಪಾಟೀಲ ಭೇಟಿ ನೀಡಿದರು. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.