ಧಾರವಾಡ: ಮಹಿಳೆ ತಲೆಯ ಮೇಲೆ ಕಲ್ಲು ಹಾಕಿ ಹತ್ಯೆಗೈದಿರುವ ಘಟನೆ ಧಾರವಾಡದ ಜಿಲ್ಲಾ ಆಸ್ಪತ್ರೆ ಬಳಿ ನಡೆದಿದೆ.
ಜಿಲ್ಲಾ ಆಸ್ಪತ್ರೆಯ ಬಳಿಯ ಸ್ಪರ್ಶ ಎನ್ನುವ ಆಸ್ಪತ್ರೆ ಬಳಿ ದುರ್ಘಟನೆ ಆಗಿದೆ. ಮಹಿಳೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ, ಕೊಲೆಯಾದ ಮಹಿಳೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.