ವಿಜಯಪುರ: ಯುವ ಪ್ರೇಮಿಗಳಿಬ್ಬರು ಪ್ರೀತಿಗಾಗಿ ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟ ತಾಲೂಕಿನ ಕಳ್ಳಕವಟಗಿಯಲ್ಲಿ ನಡೆದಿದೆ.
ಪ್ರಿಯತಮನಿಗೋಸ್ಕರ ವಿಷ ಪ್ರಿಯತಮೆ ಕುಡಿದ್ದಾನೆ. ಕಳ್ಳಕವಟಗಿಯ ಅಪ್ರಾಪ್ತ ಯುವತಿ ಹಾಗೂ ಘೋಣಸಗಿ ಮಲ್ಲು ಜಮಖಂಡಿ ಮದ್ಯೆ ಪ್ರೇಮಾಂಕುರವಾಗಿತ್ತು. ಇಬ್ಬರು ಏಕಾಂತದಲ್ಲಿದ್ದಾಗ ಹುಡುಗಿ ತಂದೆ ಗುರಪ್ಪನ ಕೈಗೆ ಸಿಕ್ಕಿಕೊಂಡಿದ್ರು. ಆಗ ಇಬ್ಬರಿಗೂ ಬುದ್ದಿ ಹೇಳಿದ್ದ ತಂದೆಯ ಮಾತು ಕೇಳದೆ ಆತುರದಲ್ಲಿ ವಿಷ ಕುಡಿದು ಅಪ್ರಾಪ್ತೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ಲು. ನನ್ನ ಮಗಳ ಸಾವಿಗೆ ಕಾರಣವಾದ ಪ್ರೇಮಿ ಮಲ್ಲುವನ್ನು ಬಿಡಬಾರದು ಎಂದು ಕೈಕಾಲು ಕಟ್ಟಿ ಅದೇ ವಿಷವನ್ನು ಯುವಕನಿಗೆ ಕುಡಿಸಿ ಕೊಲೆ ಮಾಡಲಾಗಿತ್ತು.
ಇನ್ನೂ ಪ್ರಕರಣಕ್ಕೆ ಸಂಭಂದಿಸಿದಂತೆ ಹುಡುಗಿಯ ತಂದೆ ಗುರಪ್ಪ ಹಾಗೂ ಆತನ ಅಳಿಯ ಅಜೀತ್ ನನ್ನು ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೇ, ಮಲ್ಲು ಜಮಖಂಡಿ ಶವ ಬೀಳಗಿ ಪೊಲೀಸ ಠಾಣಾ ವ್ಯಾಪ್ತಿಯ ಕೃಷ್ಣಾ ನದಿಯಲ್ಲಿ ಸಿಕ್ಕಿದೆ. ಸೆಪ್ಟೆಂಬರ್ 22ರಂದು ನಡೆದ ಘಟನೆ ಶವ ಸಿಕ್ಕಿದ ಬಳಿಕ ಪ್ರೇಮ ಪ್ರಕರಣ ಬೆಳಕಿಗೆ ಬಂದಿದೆ. ತಿಕೋಟಾ ಹಾಗೂ ಬೀಳಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.