ವಿಜಯಪುರ: ಕಾರು ಹಾಗೂ ಟ್ರ್ಯಾಕ್ಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರದ ಸೊಲ್ಲಾಪುರ ಬೈಪಾಸ್ ಬಳಿ ನಡೆದಿದೆ.
KA28 p2472 ಕಾರು ಮತ್ತು MH23 T4563 ಟ್ರಾಕ್ಟರ್ ವಾಹನಗಳ ನಡುವೆ ಅಪಘಾತವಾಗಿದೆ. ಅಪಘಾತದಲ್ಲಿ ಎರಡು ವಾಹನಗಳು ಜಖಂಗೊಂಡಿವೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.