ವಿಜಯಪುರ: ಮದ್ಯದ ನಶೆಯಲ್ಲಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ಗ್ರಾಮದಲ್ಲಿ ನಡೆದಿದೆ.
ಉಮ್ಮಣ್ಣ ಅಗರಖೇಡ ನೇಣಿಗೆ ಶರಣಾಗಿರುವ ವ್ಯಕ್ತಿ. ಇನ್ನು ಉಮ್ಮಣ್ಣ ಮದ್ಯ ವ್ಯಸನಿಯಾಗಿದ್ದು, ದಿನನಿತ್ಯ ಮದ್ಯದ ನಶೆಯಲ್ಲಿ ಇರುತ್ತಿದ್ದನು. ಇನ್ನೂ ಮದ್ಯ ಸೇವಿಸಿಯೇ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.