ವಿಜಯಪುರ: ಇಂಡಿ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಆರ್. ಎಂ. ಶಹಾ ಪಬ್ಲಿಕ್ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಭೀಮರಾಯ ಆ. ಕಡಿಹಳ್ಳಿ ಅವರಿಗೆ ಬೆಳಗಾವಿ ಜಿಲ್ಲೆಯ ಕಸ್ತೂರಿ ಸಿರಿಗನ್ನಡ ವೇದಿಕೆಯ ೨೦೨೨ನೇ ಸಾಲಿನ ಶ್ರೀಗುರು ತಿಲಕ ಪ್ರಶಸ್ತಿ ಲಭಿಸಿದೆ.
ಇವರು ಹಲವಾರು ಸೃಜನಶೀಲ ಕವನ ಕಥೆಗಳನ್ನು ಬರೆಯುವುದರ ಮೂಲಕ ಸಾಹಿತ್ಯ ಹಾಗೂ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಕಳೆದ ೯ ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಆರ್. ಎಂ. ಶಹಾ ಪಬ್ಲಿಕ್ ಶಾಲೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಕ್ಕೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಡಿ.ಆರ್.ಶಹಾ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಮಹೇಶ ಶಹಾ, ಆಡಳಿತಾಧಿಕಾರಿಯಾದ ಶ್ರೀಮತಿ ಕಲ್ಪನಾ ಶಹಾ, ಎಫ್.ಕೆ, ದೋಶಿ ಪದವಿಪೂರ್ವ ವಿಭಾಗದ ಪ್ರಾಂಶುಪಾಲರಾದ ಶ್ರೀಮತಿ ಪರವೀನ ಜಮಾದಾರ್, ಶಾಲಾ ವಿಭಾಗದ ಪ್ರಾಚಾರ್ಯರಾದ ಶ್ರೀ ಪ್ರಕಾಶ ಪಾಟೀಲ್, ಸಿಬ್ಬಂದಿವರ್ಗದವರು, ಮಿತ್ರರು ಹಲವಾರು ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.