ವಿಜಯಪುರ: ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬೆಳ್ಳುಬ್ಬಿ ಹಂಗರಗಿ ರಸ್ತೆಯಲ್ಲಿ ನಡೆದಿದೆ.
ಸಂತೋಷ ಶೆಟ್ಟೆಪ್ಪ ವಡ್ಡರ್ ಮೃತಪಟ್ಟಿರುವ ದುರ್ದೈವಿ. ಇನ್ನು ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.