ವಿಜಯಪುರ: ಮನೆಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಹವೇಲಿ ಗಲ್ಲಿಯಲ್ಲಿ ನಡೆದಿದೆ.
ಸಾಧಿಕ್ ಶೇಖ್ ಎಂಬುವರ ಮನೆಯಲ್ಲಿ ಕಳ್ಳರು ಕೈಚಳಕ ತೋರಿಸಿ, 3 ತೊಲಿ ಚಿನ್ನ, 40 ತೊಲಿ ಬೆಳ್ಳಿ, 80 ಸಾವಿರ ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳ್ಳತನಗೈದು ಪರಾರಿಯಾಗಿದ್ದಾರೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.