ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಶುಕ್ರವಾರ ಮತದಾನ ಮಾಡಿದರು.
ಮತದಾನ ವಾರ್ಡ್ ನಂಬರ್ 11ರ ಮತಗಟ್ಟೆಗಯಲ್ಲಿ ಹಕ್ಕನ್ನು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಚಲಾಯಿಸಿದರು. ತದನಂತರ ಮಾತನಾಡಿದ ಅವರು, ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸುತ್ತದೆ ಎಂಬ ವಿಶ್ವಾಸ ಇದೆ. ಅಲ್ಲದೇ, ವಿವಿಧ ಮತಗಟ್ಟೆಗಳಲ್ಲಿ ಮತದಾರರ ಹೆಸರು ಡಿಲೀಟ್ ಆಗಿರುವ ಮಾಹಿತಿ ಲಭ್ಯವಾಗಿದೆ.
ಇದನ್ನು ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆ ಬಗೆ ಹರಿಸಬೇಕು. ಇಲ್ಲದಿದ್ದರೆ ಮತದಾನ ಸ್ಥಗಿತ ಮಾಡಬೇಕೆಂದು ಒತ್ತಾಯಿಸಿದರು.