ವಿಜಯಪುರ: ವಿಜಯಪುರದಲ್ಲಿ ಸತತ ಎರಡು ಬಾರಿ ಭೂಕಂಪನ ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ ದಾಖಲು ಆಗಿದೆ ಎಂದು ವಿಜಯಪುರ ಜಿಲ್ಲಾಡಳಿತ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿನ್ನೆ ರಾತ್ರಿ 9.47 ಕ್ಕೆ ಹಾಗೂ ಇಂದು ಬೆಳಗ್ಗೆ 4.40 ರ ಸುಮಾರಿಗೆ ಭೂಕಂಪನ ಆಗಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಗ್ರಾಮ ಭೂಕಂಪನದ ಕೇಂದ್ರಬಿಂದುನಲ್ಲಿ ದಾಖಲಾಗಿದ್ದು, ಎರಡು ಕಡೆಗಳಲ್ಲು 2.8 ತೀವ್ರತೆಯಲ್ಲಿ ಭೂಕಂಪನ ಆಗಿದೆ. ಅಲ್ಲದೇ, ಮೇಲಿಂದ ಮೇಲೆ ಸಂಭವಿಸುತ್ತಿರುವ ಭೂಕಂಪನದಿಂದ ಜನತೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.