ವಿಜಯಪುರ: ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎರಡು ದಿನ ರಾಜ್ಯ ಮಟ್ಟದ ಅಂಗನವಾಡಿ ನೌಕರರ ಪ್ರಥಮ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಬುಧವಾರ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಹೇಳಿದರು.
ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 5 ಮತ್ತು 6 ರಂದು ಸಮ್ಮೇಳನ ನಡೆಯಲಿದ್ದು, ಅಂದು ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ಮಾರ್ಗವಾಗಿ ನಗರದ ಎಪಿಎಂಸಿಯಲ್ಲಿರುವ ನೀಲಕಂಠೇಶ್ವರ ಮಂಗಲ ಕಾರ್ಯಾಲಯದ ವರೆಗೂ ಮೆರವಣಿಗೆ ನಡೆಯಲಿದೆ ಎಂದರು. ಅಲ್ಲದೇ, ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಅಂಗನವಾಡಿ ನೌಕರರು ಆಗಮಿಸುತ್ತಾರೆ. ಸಮ್ಮೇಳನದಲ್ಲಿ ರಾಜ್ಯ, ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ, ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕವಾಗಿ ಮೂಲಭೂತ ಸೌಕರ್ಯ ಸೇರಿದಂತೆ 9 ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಲಾಗುತ್ತದೆ ಎಂದರು.