ಹುಬ್ಬಳ್ಳಿ: ಗುಂತಕಲ್-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಸಾಮಾನ್ಯ ಬೋಗಿಯಲ್ಲಿ ವ್ಯಕ್ತಿಯ ಬರ್ಬರವಾಗಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ರೈಲು ತಡರಾತ್ರಿ ಬ್ಯಾಹಟ್ಟಿಗೆ ಬಂದಾಗ ವ್ಯಕ್ತಿಯ ಕೊಲೆಯಾಗಿರುವುದು ಕಂಡುಬಂದಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ತೆರಳಿ ಪರಿಶೀಲಿಸಿದ್ದಾರೆ. ರೈಲಿನ ಬೋಗಿಯನ್ನು ಪ್ರತ್ಯೇಕಿಸಿ ಬ್ಯಾಹಟ್ಟಿಯಲ್ಲೇ ನಿಲ್ಲಿಸಿದ್ದಾರೆ. ಕೊಲೆಯಾದ ವ್ಯಕ್ತಿಯ ಹೆಸರು ಹಾಗೂ ವಿಳಾಸ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.