ಹುಬ್ಬಳ್ಳಿ: ಪೂನಾದಿಂದ ಉಡುಪಿಗೆ ಹೋಗುತ್ತಿದ್ದ ಬಸ್ನ ಹಿಂದಿನ ಚಕ್ರ ಬ್ಲಾಸ್ಟ್ಯಾಗಿ ಖಾಸಗಿ ಬಸ್ ನಡು ರಸ್ತೆಯಲ್ಲಿಯೇ ಹೊತ್ತಿ ಉರಿದಿರುವ ಘಟನೆ ಹುಬ್ಬಳ್ಳಿಯ ಕಾರವಾರ ರಸ್ತೆಯ ನಡೆದಿದೆ.
ರೇಷ್ಮಾ ಟ್ರಾವೆಲ್ಸ್ ಕಂಪನಿಗೆ ಸೇರಿದ ಖಾಸಗಿ ಬಸ್ ಉಡುಪಿಯತ್ತ ಹೋಗುತ್ತಿದ್ದಾಗ ಬಸ್ಸಿನ ಹಿಂದಿನ ಚಕ್ರ ಬ್ಲಾಸ್ಟ್ ಆಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಾಲಕ ತಕ್ಷಣವೇ ಬಸ್ ನಿಲ್ಲಿಸಿ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರನ್ನು ಇಳಿಸಿದ್ದಾನೆ. ಈ ವೇಳೆಯಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.