ವಿಜಯಪುರ: ಕೆಲವು ಅಧಿಕಾರಿಗಳ ದಿಕ್ಕು ತಪ್ಪಿಸುವ ಯತ್ನ ನಡೆಸಿದ್ದು ಯಾವುದೇ ಕಾರಣಕ್ಕೂ ಅಂಥ ಗೊಂದಲದ ಹೇಳಿಕೆಗೆ ಕಿವಿಗೊಡದೆ ತ್ವರಿತವಾಗಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಬಿಜೆಪಿ ಮುಖಂಡ ವಿವೇಕಾನಂದ ಡಬ್ಬಿ ಮನವಿ ಮಾಡಿದರು.
ವಿಜಯಪುರದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,
ಈಗಾಗಲೇ ರಾಜ್ಯಾದ್ಯಂತ ತಳವಾರ ಮತ್ತು ಪರಿವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡಲಾಗುತ್ತಿದೆ. ಇದನ್ನು ಸಹಿಸದ ಕೆಲವು ಕಿಡಿಗೇಡಿಗಳು ಇಲ್ಲಸಲ್ಲದ ಹೇಳಿಕೆ ನೀಡುತ್ತಾ, ಅಧಿಕಾರಿಗಳಲ್ಲಿ ಗೊಂದಲ ಸೃಷ್ಟಿಸುತ್ತಾ, ಸಮಾಜದ ಸ್ವಾಸ್ಥೃ ಕೆಡಿಸುವ ಕೃತ್ಯದಲ್ಲಿ ತೊಡಗಿಸಿಕೊಂಡಿವೆ. ಸರ್ಕಾರದ ಸ್ಪಷ್ಟ ಆದೇಶವಿದ್ದರೂ ಅದನ್ನು ಧಿಕ್ಕರಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆದಿದ್ದು, ಯಾವುದೇ ಕಾರಣಕ್ಕೂ ಅಂಥ ಕುತಂತ್ರಿಗಳ ಮಾತಿಗೆ ಕಿವಿಕೊಡಬಾರದು ಎಂದರು.