ವಿಜಯಪುರ: ವಿಜಯಪುರ ಜಿಲ್ಲಾ ಪೊಲೀಸ ವಾರ್ಷಿಕ ಕ್ರೀಡಾಕೂಟವನ್ನು ಇದೇ ನವೆಂಬರ್ 17 ರಿಂದ 19 ರವರೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಆಯೋಜಿಸಲಾಗಿದೆ.
ನವೆಂಬರ್ 17 ರಂದು ಕ್ರೀಡಾಕೂಟದ ಉದ್ಘಾಟನೆ ನಡೆಯಲಿದ್ದು, ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ಭಾಗವಹಿಸಲಿದ್ದಾರೆ.
ನವೆಂಬರ್ 19 ರಂದು ಸಂಜೆ 4 ಗಂಟೆಗೆ ನಗರದ ಸೋಲಾಪುರ ರಸ್ತೆಯಲ್ಲಿರುವ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯುವ ಕ್ರೀಡಾಕೂಟದ ಮುಕ್ತಾಯ ಸಮಾರಂಭದಲ್ಲಿ ಉತ್ತರ ವಲಯದ ಬೆಳಗಾವಿ ವಿಭಾಗದ ಆರಕ್ಷಕ ಮಹಾನಿರೀಕ್ಷಕರಾದ ಎನ್.ಸತೀಶಕುಮಾರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸೈನಿಕ ಶಾಲೆ ಪ್ರಿನ್ಸಿಪಾಲ್ ಪ್ರತಿಭಾ ಬಿಷ್ಟ್ ಅವರು ಭಾಗವಹಿಸಲಿದ್ದಾರೆ.