ವಿಜಯಪುರ: ಪುಣ್ಯ ತಿಥಿ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಹೋಗುವಾಗ ಬೈಕ್ಗೆ ಹಿಂಬದಿಯಿಂದ ಟ್ರ್ಯಾಕ್ಟರ್ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ರಸ್ತೆಯಲ್ಲಿ ನಡೆದಿದೆ.
ಸಿಂಧೂರಿ ಛಲಮಿ ಮೃತಪಟ್ಟಿರುವ ದುರ್ದೈವಿ. ಇನ್ನೂ ಪುಣ್ಯ ತಿಥಿ ಕಾರ್ಯ ಮುಗಿಸಿಕೊಂಡು ಮರಳಿ ಊರಿಗೆ ಹೋಗುವಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.