ವಿಜಯಪುರ: ವಿಜಯಪುರ ನಗರ ಅಭಿವೃದ್ಧಿ ವಿಷಯದಲ್ಲಿ ಕುಂಠಿತವಾಗಿದೆ ಎಂದು ಕಾಂಗ್ರೆಸ್ ನಾಯಕಿ ಹಾಗೂ ವಿಜಯಪುರ ನಗರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಂಯುಕ್ತಾ ಪಾಟೀಲ ಹೇಳಿದರು.
ನಗರದಲ್ಲಿ ನಡೆದ ಮಾಧ್ಯಮಗೋಷ್ಠಿ ಮಾತನಾಡಿದ ಅವರು, ನಾನು ವಿಜಯಪುರ ನಗರ ಮತಕ್ಷೇತ್ರದ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದೇನೆ. ನಾನು ನಗರದಲ್ಲಿ ಹುಟ್ಟಿ ಬೆಳೆದಿದ್ದೇನೆ. ನಾನು ಬೆಳೆದಿರುವ ನಗರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಅದಕ್ಕಾಗಿ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಶೀರ್ವಾದ ನನ್ಮೇಲೆ ಇದೆ. ಅದಕ್ಕಾಗಿ ಟಿಕೆಟ್ ಸಿಗುವ ನಂಬಿಕೆ ಇದೆ ಎಂದರು.