ವಿಜಯಪುರ: ಸಾಲಭಾದೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ.
ಚಂದ್ರಶೇಖರ ಕೊಟ್ರಪ್ಪ ಕಡೂರ 51 ಆತ್ಮಹತ್ಯೆಗೆ ಶರಣಾಗಿರುವ ರೈತ. ಬ್ಯಾಂಕ್ ಸೇರಿದಂತೆ ವಿವಿಧೆಡೆ ಸುಮಾರು 8 ಲಕ್ಷ ಖಾಸಗಿ ಸಾಲ ಮಾಡಿಕೊಂಡಿದ್ದರು. ತನ್ನದೇ ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.