ವಿಜಯಪುರ: ಕನಿಷ್ಠ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿ ಇಪಿಎಸ್ 95 ರಾಷ್ಟ್ರೀಯ ಸಂಘರ್ಷ ಸಮಿತಿಯವರು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಕನಿಷ್ಠ ಪಿಂಚಣಿ ಒದಗಿಸಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಕನಿಷ್ಠ ಪಿಂಚಣಿ 7500 ರೂಪಾಯಿಗೆ ಹೆಚ್ಚಿಸಬೇಕು. ಇದರಿಂದ ಇಪಿಎಸ್ 95 ಪಿಂಚಣಿದಾರರನ್ನು ಸಬಲೀಕರಣಗೊಳಿಸಬೇಕು ಎಂದು ಆಗ್ರಹಿಸಿದರು. ಈ ವೇಳೆಯಲ್ಲಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.