ವಿಜಯಪುರ: ಮಹಿಳೆಯನ್ನು ದುಷ್ಕರ್ಮಿಗಳು ಬರ್ಬರವಾಗಿ ನಡು ರಸ್ತೆಯಲ್ಲಿ ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹುಡ್ಕೊ ಕಾಲೋನಿಯಲ್ಲಿ ನಡೆದಿದೆ.
54 ವರ್ಷದ ಶಾಂತಾಬಾಯಿ ತಳವಾರ ಮೃತಪಟ್ಟಿರುವ ದುರ್ದೈವಿ. ಇನ್ನು ದುಷ್ಕರ್ಮಿಗಳು ಹರಿತವಾದ ಆಯುಧದಿಂದ ತಲೆಗೆ ಹೊಡೆದ ಹತ್ಯೆಗೈದು ಪರಾರಿಯಾಗಿದ್ದಾರೆ. ಇನ್ನೂ ಸ್ಥಳದಲ್ಲಿ ಅನುಮಾಸ್ಪದ ರೀತಿಯಲ್ಲಿ ಬೈಕ್ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.