ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು http://swd.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಸಮಾಜ ಕಲ್ಯಾಣ ಇಲಾಖೆ ವಿಜಯಪುರ, ಇಂಡಿ, ಸಿಂದಗಿ,ಬ.ಬಾಗೇವಾಡಿ ಹಾಗೂ ಮುದ್ದೇಬಿಹಾಳ ಇಲ್ಲಿ ಸಂಪರ್ಕಿಸಲು ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.