ವಿಜಯಪುರ: ನಾನು ಹಾಗೂ ಶಾಸಕ ಯತ್ನಾಳ ಒಂದೆ ನಾಣ್ಯದ ಎರಡು ಮುಖ ಅಲ್ಲ ಎಂದು ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ್ ಹೇಳಿದರು.
ವಿಜಯಪುರ ನಗರದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಇಬ್ಬರು ಒಳ್ಳೆಯ ಸ್ನೇಹಿತರು ಅಷ್ಟೇ. ಆದ್ರೇ, ರಾಜಕೀಯ ಬೇರೆ ಆಗಿದೆ.
ಇನ್ನು ಶಾಸಕ ಯತ್ನಾಳ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿರುವ ಪಕ್ಷ ಆಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದಾರೆ. ಆದ್ರೇ, ಬಿಜೆಪಿ ಪಕ್ಷದವರು ಭಾಗಿ ಆಗಿಲ್ಲ ಎಂದು ವಾಗ್ದಾಳಿ ಮಾಡಿದರು. ಅಲ್ಲದೇ, ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಮ್ಮ ತಪ್ಪಿನ ಅರಿವು ಆಗಿದೆ. ಈ ಸಲ್ ಎಲ್ಲ ವ್ಯವಸ್ಥೆ ಮಾಡುತ್ತೇವೆ ಎಂದರು.