ಗುಜರಾತ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಜಾಮ್ನಗರ ಉತ್ತರಮ ತಕ್ಷೇತ್ರದಲ್ಲಿ ಭಾರತೀಯ ಕ್ರಿಕೆಟ್ ತಂಡ ಆಟಗಾರ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವು ದಾಖಲಿಸಿದ್ದಾರೆ. ಬಿಜೆಪಿ ತನ್ನ
ಹಾಲಿ ಶಾಸಕರಾಗಿದ್ದ ಧರ್ಮೇಂದ್ರ ಸಿಂಗ್ ಜಡೇಜಾ ಅವರ ಬದಲು ರಿವಾಬಾಗೆ ಟಿಕೆಟ್ ನೀಡಿದ್ದರು. ಮೊದಲ ಬಾರಿಗೆ ಸ್ಪರ್ಧಿಸಿ ಶಾಸಕಿಯಾಗಿದ್ದಾರೆ.
ಓರ್ವ ಆಟಗಾರ ಪತ್ನಿಗಾಗಿ ಒಂದು ಪಕ್ಷದ ಪರ ಪ್ರಚಾರ ಮಾಡಿದ್ದು, ಸಾಕಷ್ಟು ಟೀಕೆಗೆ ಗುರಿಯಾಗಿತ್ತು.