ವಿಜಯಪುರ: ಪಾದಚಾರಿಗೆ ಅಪರಿಚಿತ ಬೈಕ್ ಡಿಕ್ಕಿಯಾಗಿರುವ ಪರಿಣಾಮ ಪಾದಚಾರಿ ಅಸುನೀಗಿರುವ ಘಟನೆ ವಿಜಯಪುರ ನಗರದ ಬಾರಾಕೋಟೆ ತಾಂಡಾದ ಬಳಿ ನಡೆದಿದೆ. ಇನ್ನು ಮೃತಪಟ್ಟಿರುವ ಪಾದಚಾರಿಯ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.