ಹುಬ್ಬಳ್ಳಿ: ಪೊಲೀಸ್ ಇಲಾಖೆ ದೊಡ್ಡ ಜವಾಬ್ದಾರಿ ಕೊಟ್ಟಿದೆ. ಹಿಂದೆ ಇಲ್ಲಿಯೇ ಡಿಸಿಪಿ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಈಗ ಪೊಲೀಸ್ ಕಮೀಷನರ್ ಆಗಿ ಬಂದಿದ್ದೇನೆ ತುಂಬಾ ಖುಷಿಯಾಗಿದೆ. ಸರ್ಕಾರ ನಿಡಿದ ಜವಾಬ್ದಾರಿಯನ್ನ ಪ್ರಾಮಾಣಿಕವಾಗಿ ನಿಬಾಯಿಸುತ್ತೇನೆಂದು ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಕಮೀಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿದ ರೇಣುಕಾ ಸುಕುಮಾರ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ, ಮಹಿಳೆಯರ ಸುರಕ್ಷತೆ, ಸೈಬರ್ ಕ್ರೈಮ್ ಇಂತಹ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಕಾನೂನಿಗೆ ಧಕ್ಕೆ ತರೊರಿಗೆ ಕಠಿಣ ಕ್ರಮ ಜರುಗಿಸಲಾಗುತ್ತದೆ. ಸಮಾಜದಲ್ಲಿ ಒಳ್ಳೆಯ ವಾತಾವರಣ ಸೃಷ್ಟಿ ಮಾಡೋಣ ಎಂದರು.