ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಮಾಡುವ ಕುಡುಕರಿಗೆ ಪೊಲೀಸರು ಹೊಸ ಕೊಡುಗೆ ನೀಡುತ್ತಿದ್ದಾರೆ. ಸಂಭ್ರಮಾಚರಣೆ ವೇಳೆ ಎಣ್ಣೆ ಕುಡುಕರಿಗೆ ಪೊಲೀಸರು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದು, ಬೆಂಗಳೂರು ಆಗ್ನೇಯ ವಿಭಾಗದಲ್ಲಿ ಕುಡುಕರ ಸೇಫ್ಟಿಗೆ ಆ್ಯಂಬುಲೆನ್ಸ್ ಪ್ಲ್ಯಾನ್ ಮಾಡಲಾಗುತ್ತಿದೆ. ಬೆಂಗಳೂರಿನ ಕೋರಮಂಗಲ, ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ವಿವಿಧ ಕಡೆಗೆ ಭದ್ರತೆಗೆ ವ್ಯವಸ್ಥೆ ನಡೆಸಲಾಗಿದ್ದು, ಈ ಭಾಗದ ಕಡೆಯ ಪ್ರತಿಯೊಂದು ಪಬ್, ರೆಸ್ಟೋರೆಂಟ್ ಎದುರು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ.